ಚಿಕ್ಕಮಗಳೂರು:- ಕಾಫಿನಾಡಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ದುರಂತ ಘಟನೆಯೊಂದು ನಡೆದಿದೆ.
ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಬೇಸತ್ತು ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸುಪ್ರೀತಾ (13) ಮೃತ ಬಾಲಕಿಯು ಕೊಪ್ಪ ತಾಲೂಕಿನ ಜಯಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಊಟ ಮಾಡುವ ಸಂದರ್ಭದಲ್ಲಿ ತಟ್ಟೆಬಿದ್ದು ಅನ್ನ ಚೆಲ್ಲಿದ್ದಕ್ಕೆ ಅಮ್ಮ ಬೈದು, ಬರೀ ಟಿವಿ ನೋಡು ಓದಬೇಡ, ಚೆಲ್ಲಿರೋ ಅನ್ನ ಕ್ಲೀನ್ ಮಾಡು ಎಂದು ತಾಯಿ ಬುದ್ಧಿವಾದ ಹೇಳಿ ತಾಯಿ ಕೆಲಸಕ್ಕೆ ಹೋಗಿದ್ದರು. ತಾಯಿ ಹೋದ ಬಳಿಕ ವೇಲ್ ನಿಂದ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Leave feedback about this