ಬೆಂಗಳೂರು:- ರಾಜ್ಯ ಸರ್ಕಾರವು ಸರ್ಕಾರಿ ಶಾಲಾ ಮಕ್ಕಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಒಂದರಿಂದ ಹತ್ತನೇ ತರಗತಿ ಮಕ್ಕಳಿಗೆ “ರಾಗಿ ಮಾಲ್ಟ್” ವಿತರಣೆಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ತರಗತಿ 1ರಿಂದ 10 ವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್, ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ ಜಿಲ್ಲೆ ಈ ಸಂಸ್ಥೆಯ ವತಿಯಿಂದ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ಪುಡಿಯನ್ನು ಬಿಸಿ ಹಾಲಿನೊಂದಿಗೆ ಮಿಶ್ರಣ ಮಾಡಿ ವಿತರಿಸಲಾಗುತ್ತಿರುವ ಕಾರ್ಯಕ್ರಮವನ್ನು ವಾರದ ಮೂರು ದಿನಗಳ ಬದಲಾಗಿ ಐದು ದಿನಗಳಿಗೆ ವಿಸ್ತರಿಸಲಾಗಿದೆ.
Leave feedback about this