ಬೆಂಗಳೂರು:- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಿನ್ನೆಯ ದಿನ (ಆ.19) ನಡೆದ ಸಚಿವ ಸಂಪುಟ ಸಭೆಯಲ್ಲಿ ಎಸ್ಸಿ ಸಮುದಾಯದ ಒಳ ಮೀಸಲಾತಿ ಜಾರಿಗೆಗೆ ಸಂಪುಟವು ತೀರ್ಮಾನಿಸಿದೆ.
3 ಪ್ರವರ್ಗಗಳಾಗಿ ವಿಂಗಡಿಸಿ ಮೀಸಲಾತಿ ಜಾರಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಎಡಗೈ, ಬಲಗೈ ಸಮುದಾಯಕ್ಕೆ ಶೇ.6ರಷ್ಟು ಮೀಸಲಾತಿಗೆ ತೀರ್ಮಾನಿಸಲಾಗಿದೆ. ಈ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡೂ ಸಮುದಾಯಗಳನ್ನು ಮನವೊಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಲಂಬಾಣಿ, ಭೋವಿ, ಕೊರಚ, ಕೊರಮ, ಅಲೆಮಾರಿ ಉಪಪಂಗಡಳಿಗೆ ಶೇ.5 ಮೀಸಲಾತಿಗೆ ಸಂಪುಟ ಸಭೆಯು ಒಪ್ಪಿಗೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಹೆಚ್ ಕೆ ಪಾಟೀಲ್ ಅವರು ತಿಳಿಸಿದ್ದಾರೆ. ಇಂದು (ಆ.20) ಸದನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ಕುರಿತಾಗಿ ವಿವರಣೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
Leave feedback about this