ದಕ್ಷಿಣ ಕನ್ನಡ

ಕಲಾಯಿ ಅಶ್ರಫ್ ಕೊಲೆ ಪ್ರಕರಣದ ಆರೋಪಿ, ವಿಎಚ್ಪಿ ಮುಖಂಡ ಭರತ್ ಕುಮ್ಡೇಲು ನ್ಯಾಯಾಂಗ ಬಂಧನ.

ಮಂಗಳೂರು:- 2017ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಲಾಯಿ ಅಶ್ರಫ್ ಕೊಲೆ ಪ್ರಕರಣದ ಆರೋಪಿ, ವಿಎಚ್ಪಿ ಮುಖಂಡ ಭರತ್ ಕುಮ್ಡೇಲು ಕಳೆದ ಶುಕ್ರವಾರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಹತ್ಯೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಭರತ್, ಶುಕ್ರವಾರ ಇಲ್ಲಿಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರಾಗಿದ್ದ. ನ್ಯಾಯಾಲಯ ಆತನಿಗೆ ಇದೇ 25ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈತನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ 13, ಪುತ್ತೂರು ಮತ್ತು ಉಪ್ಪಿನಂಗಡಿ ಠಾಣೆಗಳಲ್ಲಿ ತಲಾ ಒಂದು ಪ್ರಕರಣಗಳಿವೆ ಎಂದು ಪೊಲೀಸರು ಮಹಿತಿ ನೀಡಿದ್ದಾರೆ.

2017ರ ಮೇ 27ರಂದು ಕೊಳತ್ತಮಜಲು ನಿವಾಸಿ ಅಬ್ದುಲ್ ರಹಿಮಾನ್ ಅವರನ್ನು ಬಂಟ್ವಾಳ ತಾಲ್ಲೂಕಿನ ಕುರಿಯಾಳ ಗ್ರಾಮದ ಇರಾಕೋಡಿಯಲ್ಲಿ ಹತ್ಯೆ ಮಾಡಲಾಗಿತ್ತು. ಇನ್ನೂ ಅವರ ಜತೆಗಿದ್ದ ಕಲಂದರ್ ಶಾಫಿ ಎಂಬವರ ಮೇಲೆ ಹಲ್ಲೆ ನಡೆಸಲಾಗಿತ್ತು.

ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದಲ್ಲಿಯೂ ಭರತ್ ಮುಡ್ಲೇಲು ಆರೋಪಿ. ಈ ಪ್ರಕರಣದ ಎಲ್ಲ ಆರೋಪಿಗಳ ವಿರುದ್ಧ ಪೊಲೀಸರು ಇತ್ತೀಚಿಗಷ್ಟೇ 2000ರ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಕೋಕಾ) ಅಡಿ ಪ್ರಕರಣ ದಾಖಲಿಸಿದ್ದರು

Leave feedback about this

  • Quality
  • Price
  • Service

PROS

+
Add Field

CONS

+
Add Field
Choose Image
Choose Video