Uncategorized

ಕ್ಷೇತ್ರ ಘೋಷಣೆ ಮಾಡಿದ ನಟ ದಳಪತಿ ವಿಜಯ್

ಚೆನ್ನೈ:- ನಟ ಹಾಗೂ ಟಿವಿಕೆ ಪಕ್ಷದ ಅಧ್ಯಕ್ಷ ದಳಪತಿ ವಿಜಯ್ ಅವರು ಈಗ ರಾಜಕೀಯಕ್ಕೆ ಎಂಟ್ರಿ ಕೊಡಲು ರೆಡಿ ಆಗಿದ್ದಾರೆ. ಇದಕ್ಕೂ ಮುನ್ನ ತಮಿಳುನಾಡಿನ ನಾನಾ ಕಡೆಗಳಲ್ಲಿ ಅವರು ರ‍್ಯಾಲಿ, ಸಮಾವೇಶಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ವಿಜಯ್ ಅವರು ಮಧುರೈನಲ್ಲಿ ಆಗಸ್ಟ್ 21ರಂದು ದೊಡ್ಡ ಮಟ್ಟದ ಸಮಾವೇಶ ಆಯೋಜಿಸಿದ್ದರು.

ಇದಕ್ಕೆ ದೊಡ್ಡ ಸಂಖ್ಯೆಯಲ್ಲಿ ಜನರು ಹರಿದು ಬಂದಿದ್ದಾರೆ. ಈ ವೇಳೆ ಅವರು ಹಲವು ಘೋಷಣೆಗಳನ್ನು ಮಾಡಿದರು. ನೆರೆದ ಜನರನ್ನು ನೋಡಿ ಅವರು ಭಾವುಕರಾದರು.

ತಮಿಳುನಾಡಿನಲ್ಲಿ 234 ವಿಧಾನಸಭಾ ಕ್ಷೇತ್ರಗಳು ಇವೆ. ಎಲ್ಲಾ ಕ್ಷೇತ್ರಗಳಲ್ಲಿ ಇವರ ಪಕ್ಷ ಸ್ಪರ್ಧೆ ಮಾಡೋದಾಗಿ ಘೋಷಣೆ ಮಾಡಿದ್ದಾರೆ. ‘ನಾವು ಎಲ್ಲಾ 234 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದೇವೆ. ನಿಮ್ಮ ಮನೆಯಿಂದ ಸ್ಪರ್ಧಿಸುವ ಅಭ್ಯರ್ಥಿ ಮತ್ತು ನಾನು ಇಬ್ಬರೂ ಒಂದೇ ಎಂದುಕೊಳ್ಳಿ. ಅವರಿಗೆ ಮತ ಹಾಕುವುದು ನನಗೆ ಮತ ಹಾಕಿದಂತೆ’ ಎಂದು ದಳಪತಿ ವಿಜಯ್ ಹೇಳಿದ್ದಾರೆ. ಮಧುರೈನ ಪೂರ್ವ ಕ್ಷೇತ್ರದಿಂದ ವಿಜಯ್ ಸ್ಪರ್ಧೆ ಮಾಡೋದಾಗಿ ಹೇಳಿದ್ದಾರೆ. ಅಲ್ಲದೆ ಯಾವುದೇ ಪಕ್ಷದ ಜೊತೆ ಮೈತ್ರಿ ಕೂಡ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Leave feedback about this

  • Quality
  • Price
  • Service

PROS

+
Add Field

CONS

+
Add Field
Choose Image
Choose Video