ಬೆಂಗಳೂರು

ರಾಜ್ಯದಲ್ಲಿ ಅತ್ಯಂತ ಕೆಟ್ಟ ಸರ್ಕಾರವಿದೆ ಅದನ್ನು ತೊಲಗಿಸಿ ಜನಪರ ಸರ್ಕಾರ ತರಬೇಕು.- ಹೆಚ್ಡಿಕೆ

ಬೆಂಗಳೂರು ಡೆಸ್ಕ್:- ವಿಧಾನಸಭೆ ಚುನಾವಣೆಗೆ ಇನ್ನೂ 2 ವರ್ಷಗಳು ಇವೆ. ಈಗಲೇ ಮೈತ್ರಿಯ ಮಾತೇಕೆ, ಆ ಬಗ್ಗೆ ನಾವೂ ಮಾತನಾಡಿಲ್ಲ, ಅವರೂ (ಬಿಜೆಪಿ) ಮಾತನಾಡಿಲ್ಲ. ಮೈತ್ರಿ ಬಗ್ಗೆ ಚರ್ಚೆಯೇ ಆಗಿಲ್ಲ. ಸಮಯ ಬಂದಾಗ ಆ ಚರ್ಚೆ ಮಾಡುತ್ತೇವೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಅವರು ಸುದ್ದಿಗಾರರ ಜತೆ ಮಾತನಾಡಿ, ರಾಜ್ಯದಲ್ಲಿ ಅತ್ಯಂತ ಕೆಟ್ಟ ಸರ್ಕಾರ ಇದೆ. ಅದನ್ನು ತೊಲಗಿಸಿ ಜನಪರ ಸರ್ಕಾರ ತರಬೇಕು ಎಂಬುದು ಜೆಡಿಎಸ್‌ ಮತ್ತು ಬಿಜೆಪಿಯ ಕಾರ್ಯಸೂಚಿ. ಎರಡೂ ಪಕ್ಷಗಳು ಸೇರಿ ಆ ಕೆಲಸ ಮಾಡುತ್ತವೆ. ಒಟ್ಟಾಗಿ ಮೈತ್ರಿಕೂಟವನ್ನು ಬಲಪಡಿಸುತ್ತೇವೆ, ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದಿದ್ದಾರೆ.

ಜಿಬಿಎಯ ಪಾಲಿಕೆಗಳು ಮತ್ತು ಇತರ ಸ್ಥಳೀಯ ಸಂಸ್ಥೆಗಳಿಗೆ ಇನ್ನೇನು ಚುನಾವಣೆ ನಡೆಯಲಿವೆ. ಅದಕ್ಕೆ ಎಲ್ಲ ಪಕ್ಷಗಳೂ ಸಿದ್ಧತೆ ಮಾಡಿಕೊಂಡಿವೆ. ನಾವೂ ಸಿದ್ದತೆ ಮಾಡಿಕೊಳ್ಳಬೇಕಿದೆ. ಅದಕ್ಕಾಗಿಯೇ ಶನಿವಾರ ಸಭೆ ಕರೆಯಲಾಗಿತ್ತು. ಮತಗಟ್ಟೆ, ವಾರ್ಡ್‌ ಮತ್ತು ವಿಧಾನಸಭಾ ಕ್ಷೇತ್ರದ ಮಟ್ಟದಲ್ಲಿ ಏನೆಲ್ಲಾ ಸಿದ್ಧತೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಚರ್ಚಿಸಿದ್ದೇವೆ ಎಂದರು.

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಸಂಬಂಧ ಎರಡೂ ಪಕ್ಷಗಳ ಮಧ್ಯೆ ಈವರೆಗೆ ಚರ್ಚೆ ಆಗಿಲ್ಲ. ಸಮಯ ಬಂದಾಗ ಚರ್ಚೆ ಮಾಡುತ್ತೇವೆ. ಆಗ ಪಕ್ಷದ ವೇದಿಕೆಯಲ್ಲೂ ಸಮಾಲೋಚನೆ ನಡೆಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಜೆಡಿಎಸ್‌ ಮತ್ತು ಬಿಜೆಪಿ ಒಟ್ಟಾಗಿ ಮೈತ್ರಿಕೂಟವನ್ನು ಬಲಪಡಿಸಲಿವೆ ಎಂದಿದ್ದಾರೆ.

Leave feedback about this

  • Quality
  • Price
  • Service

PROS

+
Add Field

CONS

+
Add Field
Choose Image
Choose Video