ಬೆಂಗಳೂರು:- ನಗರದಾದ್ಯಂತ ವರುಣನ ಆರ್ಭಟ ಮುಂದುವರೆದಿದ್ದು, ರಾಜಧಾನಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಗುರುವಾರ ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಬೆಂಗಳೂರಿನ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮುಂದಿನ ಒಂದು ವಾರ ಮಳೆ ಮುಂದುವರೆಯುವ ನಿರೀಕ್ಷೆಯಿದೆ.
ಹವಾಮಾನ ಇಲಾಖೆಯು ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ, ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿರುವುದರಿಂದ ‘ಆರೆಂಜ್ ಅಲರ್ಟ್’ ಘೋಷಿಸಿದೆ. ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಪ್ರದೇಶಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ವಿಶೇಷವಾಗಿ ಬಾಗಲಕೋಟೆ, ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಉತ್ತರ ಕರ್ನಾಟಕದ ಇತರೆ ಜಿಲ್ಲೆಗಳಲ್ಲಿಯೂ ಭಾರೀ ಮಳೆ ಸುರಿಯಲಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.
Leave feedback about this