ಚಿಕ್ಕಮಗಳೂರು

ಸ್ಥಳೀಯ ಸಂಸ್ಥೆಗಳಿಗೆ ಅಧಿಕಾರಾವಧಿ ಮುಗಿಯುವವರೆಗೆ ಆಡಳಿತಾಧಿಕಾರಿ ನೇಮಕ ಬೇಡವೆಂದ ಪೀಠ

ಚಿಕ್ಕಮಗಳೂರು:- ಸ್ಥಳೀಯ ಸಂಸ್ಥೆಗಳಿಗೆ ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯುವವರೆಗೆ ಆಡಳಿತಾಧಿಕಾರಿ ನೇಮಕ ಬೇಡ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶವೊಂದು

ಹೈಕೋರ್ಟ್ ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಹೈಕೋರ್ಟ್ ಪೀಠವು ಮಧ್ಯಂತರ ಆದೇಶ ನೀಡಿದೆ.

ಜಿಲ್ಲೆಯ ನರಸಿಂಹರಾಜಪುರ ಪಟ್ಟಣ ಪಂಚಾಯ್ತಿ, ಉಡುಪಿ ನಗರಸಭೆ, ಕಡೂರು ಪುರಸಭೆ, ಕೊರಟಗೆರೆ ಪಟ್ಟಣ ಪಂಚಾಯ್ತಿ, ಕೃಷ್ಣರಾಜ ಪೇಟೆ ಪುರಸಭೆ, ಟಿ ನರಸೀಪುರ ಪುರಸಭೆ, ಪಿರಿಯಾಪಟ್ಟಣ ಪುರಸಭೆ ಸದಸ್ಯರಿಂದ ಅರ್ಜಿ ಸಲ್ಲಿಸಲಾಗಿತ್ತು.

ಸದಸ್ಯರ ಅವಧಿಯಿಂದ ಎಒ ನೇಕವಾಗಿದ್ದ ಅವಧಿ ಹೊರತುಪಡಿಸಲು ಕೋರಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ಚುನಾಯಿತ ಸದಸ್ಯರ ಅಧಿಕಾರವಧಿ ಮುಗಿಯುವ ತನಕ ನೇಮಕ ಬೇಡವೆಂದು ಆದೇಶಿಸಿದೆ.

ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಿಸದಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿ ಸೂಚಿಸಿದೆ. ರಾಜ್ಯ ಸರ್ಕಾರ, ಜಿಲ್ಲಾಧಿಕಾರಿ, ರಾಜ್ಯ ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಲಾಗಿದೆ.

Leave feedback about this

  • Quality
  • Price
  • Service

PROS

+
Add Field

CONS

+
Add Field
Choose Image
Choose Video