ವಿಜಯಪುರ:- ಹೈಕೋರ್ಟ್ ದ್ವಿಸದಸ್ಯಪೀಠ ಐತಿಹಾಸಿಕ ತೀರ್ಪು ನೀಡಿದ್ದು, ಇಬ್ಬರು ಸಹೋದರರಿಗೆ ಮರಣ ದಂಡನೆ ಶಿಕ್ಷೆ ವಿಧಿಸಿದೆ ಮಾತ್ರವಲ್ಲದೆ, ಅದೇ ಕುಟುಂಬದ ಇನ್ನೂ ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಗುಂಡಕನಲ್ ಗ್ರಾಮದ ಇಬ್ರಾಹಿಂ ಸಾಬ್ (31) ಹಾಗೂ ಈತನ ಸಹೋದರ ಲಾರಿ ಚಾಲಕ ಅಕ್ಬರ್ (28) ಎಂಬ ಅಪರಾಧಿಗಳಿಗೆ ಮರಣ ದಂಡನೆ ವಿಧಿಸಲಾಗಿದೆ. ಈ ಸಹೋದರರು ತಮ್ಮ ತಂಗಿ ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಾಳೆ ಎನ್ನುವ ಕಾರಣಕ್ಕೆ ಆಕೆಯನ್ನು ಬೆಂಕಿ ಹಚ್ಚಿ ಜೀವಂತ ಸುಟ್ಟು ಹಾಕಿದ್ದರು.
ಸೈಬಣ್ಣ ಎನ್ನುವ ದಲಿತ ಯುವಕನ ಜೊತೆ ಬಾನು ಬೇಗಂ ಪ್ರೀತಿಸಿ ಮದುವೆಯಾಗಿದ್ದಳು.ಬಾನು ಬೇಗಂ ಒಂಬತ್ತು ತಿಂಗಳ ತುಂಬು ಗರ್ಭಿಣಿ ಯಾಗಿದ್ದ ಸಂರ್ಭದಲ್ಲಿ ಆಕೆಯ ಸಹೋದರರೇ ಆಕೆಗೆ ಬೆಂಕಿ ಹಚ್ಚಿ ಸಜೀವವಾಗಿ ಕೊಂದು ಹಾಕಿದ್ದರು. 2017 ರಲ್ಲಿ ನಡೆದ ಈ ಕೊಲೆ ಪ್ರಕರಣದ ಬಗ್ಗೆ ಬಸವನಬಾಗೇವಾಡಿ ಪೊಲೀಸರು ತನಿಖೆ ನಡೆಸಿ ಚಾರ್ಜ್ಶಿಟ್ ಸಲ್ಲಿಸಿದರು.
ಈ ಬಗ್ಗೆ ವಿಚಾರಣೆ ನಡೆಸಿದ ವಿಜಯಪುರ ಜಿಲ್ಲಾ ಕೋರ್ಟ್, ಈ ಇಬ್ಬರು ಸಹೋದರರಿಗೆ ಮರಣದಂಡನೆ ಶಿಕ್ಷೆ ಹಾಗೂ ಇವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.ಇದೀಗ ಕಲಬುರಗಿ ಹೈಕೋರ್ಟ್ ದ್ವಿಸದಸ್ಯ ಪೀಠ ಈ ತೀರ್ಪುನ್ನು ಎತ್ತಿ ಹಿಡಿದಿದೆ. ಹೀಗೆ ಅಮಾನವೀಯವಾಗಿ ಕೊಲೆಯಾದ ಬಾನು ಬೇಗಂ ಅವರ ತಾಯಿ ಹಾಗೂ ಕುಟುಂಬದ ಐವರು ಸದಸ್ಯರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
Leave feedback about this