ಬೆಂಗಳೂರು

ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇದೀಗ ಮತ್ತೆ ಆರಂಭ

ಬೆಂಗಳೂರು:- ಪಡಿತರ ಚೀಟಿ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಇದು ಬರೀ ರೇಷನ್‌ ಪಡೆಯಲು ಅಷ್ಟೇ ಅಲ್ಲದೆ, ಹಲವು ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಸೇರಿದಂತೆ ಇತರೆ ಅರ್ಜಿ ಸಲ್ಲಿಕೆಗಳಿಗೂ ಬೇಕೇ ಬೇಕಾಗುತ್ತದೆ. ಇನ್ನೂ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇದೀಗ ಮತ್ತೆ ಆರಂಭ ಆಗಿದೆ.

ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಿ ಅಂತಹವರನ್ನು ಎಪಿಎಲ್‌ಗೆ ವರ್ಗಾವಣೆ ಮಾಡುವ ಕೆಲಸ ನಡೆಯುತ್ತಿದೆ. ಈ ನಡುವೆಯೇ ಇದೀಗ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆಗೆ ಇದೀಗ ಮತ್ತೆ ಅವಕಾಶ ಕಲ್ಪಿಸಿಕೊಡಲಾಗಿದೆ. ಗ್ಯಾರಂಟಿ ಯೋಜನೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎನ್ನುವ ಕಾರಣದಿಂದ ಈ ಪ್ರಕ್ರಿಯೆಯನ್ನು ನಿಲ್ಲಿಸಲಾಗಿತ್ತು.

ಈ ಹಿಂದೆಯಷ್ಟೇ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಿ ಮತ್ತೆ ಕ್ಲೋಸ್‌ ಮಾಡಲಾಗಿತ್ತು. ಆದಾರೀಗ ಮತ್ತೆ ಅವಕಾಶ ಕಲ್ಪಿಸಲಾಗಿದ್ದು, ಫಲಾನುಭವಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ರಾಜ್ಯದಲ್ಲಿ ಹೊಸ (ಬಿಪಿಎಲ್‌, ಎಪಿಎಲ್‌, ಇತ್ಯಾದಿ) ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆಗೆ ಮತ್ತೆ ಅವಕಾಶ ಕಲ್ಪಿಸಲಾಗಿದೆ.

ಅರ್ಹರು ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ahara.kar.nic.in ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಫಲಾನುಭವಿಗಳು ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್‌ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು:

* ವೋಟರ್ ಐಡಿ

* ಆಧಾರ್ ಕಾರ್ಡ್

* ವಯಸ್ಸಿನ ಪ್ರಮಾಣ ಪತ್ರ

* ವಾಹನ ಚಾಲನಾ ಪರವಾನಗಿ

* ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರ

* ಮೊಬೈಲ್ ಸಂಖ್ಯೆ

* ಸ್ವಯಂ ಘೋಷಿತ ಪ್ರಮಾಣ ಪತ್ರ

ಅರ್ಜಿ ಸಲ್ಲಿಸುವ ವಿಧಾನಗಳು: kar.nic.in ಈ ಅಧಿಕೃತ ವೆಬ್ ಸೈಟ್ ತಾಣಕ್ಕೆ ಭೇಟಿ ನೀಡಿ ಅಲ್ಲಿ ಕಾಣಿಸುವ ಇ-ಸೇವೆಗಳು ಎಂಬುದರ ಮೇಲೆ ಕ್ಲಿಕ್ ಮಾಡಿ ಅಲ್ಲದೆ, https://ahara.kar.nic.in/Home/EServices ವೆಬ್‌ಸೈಟ್‌ನಲ್ಲೂ ನೇರವಾಗಿ ಕ್ಲಿಕ್ ಮಾಡಬಹುದು.

ನೀವು ಇ-ಪಡಿತರ ಚೀಟಿ ಆಯ್ಕೆ ಮಾಡಿ, ಕೆಳಗಡೆ ಸ್ಕ್ರಾಲ್ ಮಾಡಿದರೆ, ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವ ಲಿಂಕ್ ಸಿಗಲಿದೆ. ಅಲ್ಲಿ ಕ್ಲಿಕ್ ಮಾಡಿ ನೀವು ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಭಾಷೆಯನ್ನು ಆಯ್ಕೆ ಮಾಡಬೇಕಾಗುತ್ತದೆ. ಅಲ್ಲಿ ಕೇಳುವಂತಹ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಬೇಕಾಗುತ್ತದೆ.

ನೀವು ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸುತ್ತಿದ್ದೀರಾ ಎನ್ನುವುದನ್ನು ಆಯ್ಕೆ ಮಾಡಿಕೊಂಡು ನಮೂದಿಸಿ

ಬಳಿಕ ಅರ್ಜಿಯ ಜೊತೆಗೆ ಕೇಳುವ ದಾಖಲೆಗಳ ಸಾಫ್ಟ್ ಕಾಫಿಗಳನ್ನು ಅಪ್ಲೋಡ್ ಮಾಡಿ. ಆಗ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.

Leave feedback about this

  • Quality
  • Price
  • Service

PROS

+
Add Field

CONS

+
Add Field
Choose Image
Choose Video