ಚಿಕ್ಕಮಗಳೂರು

ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತಗಳ ಚುರುಕು: ಮುಂದಿನ ಎರಡ್ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ

ಚಿಕ್ಕಮಗಳೂರು:- ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತಗಳು ಚುರುಕುಗೊಂಡಿರುವುದರಿಂದ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಎರಡ್ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೇ ಕೊನೆಯ ವಾರ ಪಶ್ಚಿಮ ಕರಾವಳಿ ಮೂಲಕ ಪ್ರವೇಶಿಸಿದ್ದ ಮುಂಗಾರು, ಇದೀಗ ವಾಪಸ್‌ ಬರುತ್ತಿದೆ. ಹೀಗಾಗಿ, ಒಡಿಶಾದಿಂದ ರಾಜ್ಯದವರೆಗೆ ಮಳೆ ಮಾರುತಗಳು ವ್ಯಾಪಸಕವಾಗಿರುವ ಪರಿಣಾಮ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಗುರುವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ ಹಾಗೂ ತುಮಕೂರು, ಶುಕ್ರವಾರಕ್ಕೆ ಕೋಲಾರ, ಕೊಡಗು, ಹಾಸನ, ಚಿಕ್ಕಮಂಗಳೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ.

Leave feedback about this

  • Quality
  • Price
  • Service

PROS

+
Add Field

CONS

+
Add Field
Choose Image
Choose Video