ರಾಯಚೂರು

ಶಾಸಕಿ ಕರೆಮ್ಮ ನಾಯಕ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ

ರಾಯಚೂರು:- ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತವಾಗಿರುವ ಘಟನೆ ಜಿಲ್ಲೆಯ ಲಿಂಗಸಗೂರು ತಾಲೂಕಿನಲ್ಲಿ ನಡೆದಿದೆ. ಕರೆಮ್ಮ ನಾಯಕ್ ಅವರ ಕಾರು ಮುಂದೆ ಹೋಗುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ, ಅಪಘಾತದಲ್ಲಿ ಶಾಸಕಿ ಕರೆಮ್ಮ ನಾಯಕ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಲಿಂಗಸಗೂರು ತಾಲೂಕಿನ ಗೋಲಿಪಲ್ಲಿ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave feedback about this

  • Quality
  • Price
  • Service

PROS

+
Add Field

CONS

+
Add Field
Choose Image
Choose Video