ಕಲಬುರಗಿ

ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಬೈಠಕ್ ಹೆಸರಲ್ಲಿ ನಡೆಸುವ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದ ಖರ್ಗೆ

ಕಲಬುರಗಿ:- ಯಾವುದೇ ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಗ್ರಾಮೀಣಭಿವೃದ್ದಿ ಹಾಗೂ ಪಂಚಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಮುಖ್ಯಮಂತ್ರಿಗೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಸಚಿವ ಪ್ರಿಯಾಂಕ ಖರ್ಗೆ ಅವರು, ನಾಡಿನ ಮಕ್ಕಳು, ಯುವ ಸಮುದಾಯ, ಸಾರ್ವಜನಿಕರು ಮತ್ತು ಸಮಾಜದ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಮತ್ತಿತರ ಕಡೆ ಆರ್ ಎಸ್ ಎಸ್ ನಡೆಸುವ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಜನ ಸಮುದಾಯದಲ್ಲಿ ದ್ವೇಷ ಬಿತ್ತುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸುವುಕ್ಕಾಗಿ ಹಾಗೂ ದೇಶದ ಜಾತ್ಯತೀತ ಮೌಲ್ಯಗಳನ್ನು ಎತ್ತಿಹಿಡಿಯುವುದಕ್ಕಾಗಿ ಸಮಗ್ರತೆ, ಸಮಾನತೆ ಮತ್ತು ಏಕತೆಯ ಮೂಲಭೂತ ತತ್ವಗಳನ್ನೊಳಗೊಂಡ ಸಂವಿಧಾನವು ನಮಗೆ ಅಧಿಕಾರವನ್ನು ನೀಡಿದೆ ಎಂದು ಹೇಳಿದ್ದಾರೆ.

ಆರ್ ಎಸ್ ಎಸ್ ಹೆಸರಿನ ಸಂಘಟನೆಯು ಸರ್ಕಾರಿ ಹಾಗೂ ಸಾರ್ವಜನಿಕ ಸರ್ಕಾರಿ ಮೈದಾನಗಳನ್ನು ಬಳಸಿಕೊಂಡು ಶಾಖೆ ಕಡಲೆನಡೆಸುತ್ತಾ ಘೋಷಣೆಗಳನ್ನು ಕೂಗುತ್ತಾ ಮಕ್ಕಳು ಮತ್ತು ಯುವ ಸಮುದಾಯದ ಮನಸಿನಲ್ಲಿ ಶ್ರೀನಿವಾರತದ ವಾಣಿಯ ವಿರುದ್ಧವಾಗಿ, ಹಾಗೂ ಸಂವಿಧಾನದ ಆಶಯಗಳ ವಿರುದ್ಧವಾಗಿ ನಕಾರಾತ್ಮಕ ಆಲೋಚನೆಗಳನ್ನು ತುಂಬಲಾಗುತ್ತಿದೆ.

ಪೊಲೀಸ್ ಮೂಲಕ ಅನುಮತಿ ಪಡೆಯದ ದೊಣ್ಣೆಗಳನ್ನು ಹಿಡಿದು ಆಕ್ರಮಣಕಾರಿ ಪದರ್ಶನ ಮುಗ್ಧ ಮಕ್ಕಳು ಹಾಗೂ ಯುವಜನರ ಮನಸಿನ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಸಚಿವ ಖರ್ಗೆ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

Leave feedback about this

  • Quality
  • Price
  • Service

PROS

+
Add Field

CONS

+
Add Field
Choose Image
Choose Video