Uncategorized

ನಾನು ಇಲ್ಲಿಗೆ ಬಂದಿರೋದು ರಾಜಕಾರಣ ಮಾಡುವುದಕ್ಕೆ.- ಡಿಕೆಶಿ

ದೆಹಲಿ:- ಸಿಎಂ ಕುರ್ಚಿ ಕಾದಾಟದ ನಡುವೆ ಹೈಕಮಾಂಡ್ ನಾಯಕರ ಭೇಟಿಗೆ ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರು ಪಟ್ಟಪಾಡು ಅಷ್ಟಿಷ್ಟಲ್ಲ. ಪ್ರತಿ ಬಾರಿಯೂ ದೆಹಲಿಗೆ ಹೋಗಿ ಬಂದ ದಾರಿಗೆ ಸುಂಕವಿಲ್ಲದಂತೆ ವಾಪಸ್ಸು ಬರುತ್ತಿದ್ದರು. ಆದರೆ, ಈ ಬಾರಿ ಕಡೆಗೂ ಹೈಕಮಾಂಡ್ ನ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ದೆಹಲಿಗೆ ಬಂದ ಮೇಲೆ ಎಲ್ಲಾ ವಿಚಾರ ಮಾತನಾಡಬೇಕು, ಅದನ್ನ ಮಾತನ್ನಾಡಿದ್ದೀನಿ. ಆದರೆ, ಯಾರ್ಯಾರ ಹತ್ತಿರ ಏನೇನು ಮಾತನಾಡಿದೆ ಅಂತ ಬಹಿರಂಗವಾಗಿ ಹೇಳೋಕೆ ಆಗಲ್ಲ. ಒಳಗೆ ನಡೆದ ಚರ್ಚೆಯನ್ನು ಹೊರಗೆ ಹೇಳುವುದು ಸರಿಯಲ್ಲ. ನಾನು ಇಲ್ಲಿಗೆ ಬಂದಿರೋದು ರಾಜಕಾರಣ ಮಾಡುವುದಕ್ಕೆ. ಸುಮ್ಮನೆ ಗಾಳಿ ಕುಡಿಯೋಕೆ ಬಂದಿಲ್ಲ. ವರಿಷ್ಠರ ಬಳಿ ಏನು ಮಾತನಾಡಬೇಕೋ ಅದನ್ನ ಮಾತನ್ನಾಡಿದ್ದೀನಿ. ಎಲ್ಲದಕ್ಕೂ ಕಾಲ ಉತ್ತರ ಕೊಡುತ್ತೆ ಎಂಬ ಮಾತನ್ನ ಹೇಳಿದ್ದಾರೆ.

ದೆಹಲಿಯಿಂದ ರಾಜ್ಯಕ್ಕೆ ಹಿಂತಿರುಗಿದಾಗ ರಾಜಕಾರಣದಲ್ಲಿ ಏನೆಲ್ಲಾ ಬದಲಾವಣೆಗಳು ಆಗಬಹುದು ಎಂಬುದನ್ನ ಕಾದು ನೋಡಬೇಕಿದೆ. ಸದ್ಯ ಅಸ್ಸಾಂ ಚುನಾವಣೆಯ ಜವಾಬ್ದಾರಿಯೂ ಡಿ.ಕೆ ಶಿವಕುಮಾರ್ ಅವರ ಹೆಗಲಿಗೇರಿದೆ. ತಮ್ಮ ರಾಜಕೀಯ ಸ್ಥಾನಮಾನದ ಜೊತೆಗೆ ಅತ್ತ ಅಸ್ಸಾಂ ಚುನಾವಣೆಯನ್ನು ಅವರು ನೋಡಬೇಕಿದೆ.

Leave feedback about this

  • Quality
  • Price
  • Service

PROS

+
Add Field

CONS

+
Add Field
Choose Image
Choose Video