ರಾಮನಗರ

ಶಾಸಕ ಹೆಚ್.ಸಿ.ಬಾಲಕೃಷ್ಣ ಡಿಕೆಶಿ ಪರವಾಗಿ ನೇರ ಬ್ಯಾಟಿಂಗ್.

ರಾಮನಗರ:- ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆಯ ಕೂಗು ಏರುತ್ತಲೇ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಣಗಳ ನಡುವಿನ ಶೀತಲ ಸಮರ ಮತ್ತೆ ಮುನ್ನೆಲೆಗೆ ಬಂದಿದ್ದು, ಮಾಗಡಿ ಶಾಸಕ ಹಾಗೂ ಡಿಕೆಶಿ ಆಪ್ತ ಹೆಚ್.ಸಿ.ಬಾಲಕೃಷ್ಣ ಪರವಾಗಿ ನೇರ ಬ್ಯಾಟಿಂಗ್ ಬೀಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ನಾಯಕರಂತೆ ರಾಜಿಯಾಗಿದ್ದರೆ ಡಿಕೆಶಿ ಕಥೆಯೇ ಬೇರೆಯಿರುತ್ತಿತ್ತು. ತಮ್ಮ ನಾಯಕನ ನಿಷ್ಠೆಯನ್ನು ಬಲವಾಗಿ ಸಮರ್ಥಿಸಿಕೊಂಡ ಬಾಲಕೃಷ್ಣ, ಡಿ.ಕೆ.ಶಿವಕುಮಾರ್ ಅವರು ರಾಜಕೀಯದಲ್ಲಿ ಕಷ್ಟದ ದಿನಗಳನ್ನು ಎದುರಿಸಿದರೂ ಸಿದ್ಧಾಂತದ ವಿಷಯದಲ್ಲಿ ಎಂದೂ ರಾಜಿ ಮಾಡಿಕೊಂಡಿಲ್ಲ. ಬೇರೆ ಎಷ್ಟೋ ನಾಯಕರು ಅಧಿಕಾರಕ್ಕಾಗಿ ಅಥವಾ ಇತರೆ ಕಾರಣಗಳಿಗೆ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡ ಉದಾಹರಣೆಗಳಿವೆ. ಆದರೆ, ಡಿಕೆಶಿ ಅವರು ಬೇರೆ ನಾಯಕರ ರೀತಿ ಬಿಜೆಪಿ ಜೊತೆ ರಾಜೀ ಮಾಡಿಕೊಂಡಿದ್ದರೆ, ಇಷ್ಟೊತ್ತಿಗೆ ಅವರು ಯಾವ ಸ್ಥಾನದಲ್ಲಿ ಇರುತ್ತಿದ್ದರೋ ಗೊತ್ತಿಲ್ಲ. ಅವರು ಯಾವುದಕ್ಕೂ ಜಗ್ಗದೆ, ಕುಗ್ಗದೆ, ಯಾವುದೇ ಆಮಿಷಗಳಿಗೆ ಒಳಗಾಗದೆ ಕೇವಲ ಪಕ್ಷಕ್ಕೋಸ್ಕರ ಎಲ್ಲವನ್ನೂ ಸಹಿಸಿಕೊಂಡು ಕಾಂಗ್ರೆಸ್ಸಿನಲ್ಲೇ ಗಟ್ಟಿಯಾಗಿ ನಿಂತಿದ್ದಾರೆ ಎಂದು ಬಾಲಕೃಷ್ಣ ನೇರವಾಗಿ ಡಿಕೆಶಿ ಪರ ಬ್ಯಾಟಿಂಗ್ ಮಾಡಿದ್ದಾರೆ.

Leave feedback about this

  • Quality
  • Price
  • Service

PROS

+
Add Field

CONS

+
Add Field
Choose Image
Choose Video